ಏಪ್ರಿಲ್‌ 1ರಿಂದ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌: ಸಿಎಂ ಬೊಮ್ಮಾಯಿ ಸೂಚನೆ

ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಸಿಗಲಿದ್ದು, ಈ ಕುರಿತು  ವೇದಿಕೆಯಲ್ಲಿ ಸಾರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಏಪ್ರಿಲ್‌ 1ರಿಂದ ದುಡಿಯುವ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌ ಸಿಗಲಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವೋಲ್ವೋ ಅಂಬಾರಿ ಬಸ್‌ ಸೇವೆಗೆ ಚಾಲನೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಸೂಚನೆ ನೀಡಿದ್ದಾರೆ. ವಿಧಾನಸೌಧದ ಆವರಣದಲ್ಲಿ 20 ಅಂಬಾರಿ ಉತ್ಸವ ವಿಶೇಷ ಬಸ್‌'ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇವೆಲ್ಲಾ ಅತ್ಯುತ್ತಮ ಸೌಕರ್ಯ ಹೊಂದಿರುವ ಕೆಎಸ್‌ಆರ್‌ಟಿಸಿ ಬಸ್‌'ಗಳಾಗಿದ್ದು, ನೂತನ ಬಸ್‌ ಹತ್ತಿ ಸಿಎಂ ಪರಿಶೀಲಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್'ಗಳನ್ನು ಲೋಕಾರ್ಪಣೆ ಮಾಡಿ ಸಿಎಂ ಮಾತನಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video