ಮೋದಿ, ಶಾ ಕೂಡ ಜೈಲಿಗೆ ಹೋಗ್ತಾರೆ ಎಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ, NRC ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಕೇಂದ್ರ ಸರ್ಕಾರ ವಿರುದ್ಧ ಗುಡುಗಿದರು. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಹಾಗಾದ್ರೆ ದೊರೆಸ್ವಾಮಿ ಅವರು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

First Published Jan 4, 2020, 10:19 PM IST | Last Updated Jan 4, 2020, 10:19 PM IST

ಬೆಂಗಳೂರು, [ಜ.04]: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಿಎಎ, NRC ವಿರುದ್ಧದ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಶುಕ್ರವಾರ ಮುಸ್ಲಿಂ ಹಾಗೂ ಪ್ರಗತಿಪರ ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈದ್ಗಾ ಮೈದಾನದಲ್ಲಿ ಬೃಹತ್ ಹೋರಾಟ ನಡೆಸಿದ್ರು.. ಇಂದು [ಶನಿವಾರ] ಆರ್.ಟಿ.ನಗರ, ಜಯನಗರ ಹಾಗೂ ಫ್ರೀಡಂ ಪಾರ್ಕ್ನಲ್ಲಿ ಸಿಎಎ ವಿರುದ್ಧದ ಆಕ್ರೋಶದ ಕಹಳೆ ಮೊಳಗಿದೆ. ಇನ್ನು ರೈತ ಸಂಘ, ಹಸಿರು ಸೇನೆ ವತಿಯಿಂದ ವಿವಿಧೆಡೆ ವಿಚಾರ ಸಂಕಿರಣಗಳು  ನಡೆದಿದೆ.

ಅದರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಕೇಂದ್ರ ಸರ್ಕಾರ ವಿರುದ್ಧ ಗುಡುಗಿದರು. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಹಾಗಾದ್ರೆ ದೊರೆಸ್ವಾಮಿ ಅವರು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.