ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ನೃತ್ಯ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹರಳಕುಂಟೆ ಗ್ರಾಮದ ಶ್ರಾವಣಿ (14) ಮೃತಪಟ್ಟ ವಿದ್ಯಾರ್ಥಿನಿ.

Share this Video
  • FB
  • Linkdin
  • Whatsapp

ಕೋಲಾರ(ಜ.24): ನೃತ್ಯ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹರಳಕುಂಟೆ ಗ್ರಾಮದ ಶ್ರಾವಣಿ (14) ಮೃತಪಟ್ಟ ವಿದ್ಯಾರ್ಥಿನಿ.

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೆ ಆದಿತ್ಯ, ಕೃತ್ಯವೆಸಗಿದ ಸ್ಥಳ ಮಹಜರು

ವಿಮಲ ಹೃದಯ ಶಾಲೆಯ ವಿದ್ಯಾರ್ಥಿನಿ 9ನೇ ತರಗತಿಯಲ್ಲಿ ಓದುತ್ತಿದ್ದ ಶ್ರಾವಣಿ ಸಾವನ್ನಪ್ಪಿದ್ದಾಳೆ. ಎಲ್ಲ ವಿದ್ಯಾರ್ಥಿನಿಯರು ನೃತ್ಯ ಅಭ್ಯಾಸ ಮಾಡುತ್ತಿದ್ದರು. ಶಿಕ್ಷಕರೊಬ್ಬರು ನೃತ್ಯವನ್ನು ಹೇಳಿಕೊಡುತ್ತಾ ಕುಳಿತಿದ್ದರು. ನೃತ್ಯ ಮಾಡುತ್ತಿದ್ದಂತೆಯೇ ಬಾಲಕಿ ಕುಸಿದು ಬಿದ್ದಿದ್ದಾಳೆ. ಶನಿವಾರ ಶಾಲಾ ವಾರ್ಷಿಕೋತ್ಸವದ ನಿಮಿತ್ತ ಶುಕ್ರವಾರ ನೃತ್ಯ ಅಭ್ಯಾಸ ಮಾಡುತ್ತಿದ್ದಳು. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Video