ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯಪುರದ ಗೋಲ್ ಗುಮ್ಮಟ

ವಿಜಯಪುರದ ಗೋಲ್ ಗುಮ್ಮಟ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

First Published Apr 3, 2023, 12:10 PM IST | Last Updated Apr 3, 2023, 12:10 PM IST

ವಿಜಯಪುರದ ಗೋಲ್ ಗುಮ್ಮಟ ಸದ್ಯ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.ಮೊಘಲ್ ದೊರೆ ಶಾಹ್ ಜಹಾನನು ತನ್ನ ಪತ್ನಿ ಮುಕ್ತಾಜಳ ಮೇಲಿನ ಪ್ರೇಮದ ಸಂಕೇತವಾಗಿ 17ನೇ ಶತಮಾನದಲ್ಲಿ ನಿರ್ಮಿಸಿ ಇದೀಗ ಜಗತ್ತಿನ 7 ಅದ್ಭುತಗಳಲ್ಲಿ ಒಂದು ಎನಿಸಿಕೊಂಡಿರುವ 'ತಾಜ್ ಮಹಲ್ ' ಶ್ವೇತ ಸುಂದರಿಯಾದರೆ, ಕರ್ನಾಟಕದ 'ಗೋಲ್ ಗುಮ್ಮಟ ಕೃಷ್ಣ ಸುಂದರಿ. ಜಗತ್ತಿನ ಅತಿ ದೊಡ್ಡ ಗುಮ್ಮಟಗಳಲ್ಲಿ ಒಂದು ವಿಜಯಪುರದ ಗೋಲ್ ಗುಮ್ಮಟ. ಇಂಡೋ-ಸಾರ್ಸೆನಿಕ್ ಶೈಲಿಯ ಈ ಬೃಹತ್‌ ಸ್ಮಾರಕ ಆದಿಲ್ ಶಾಹಿ ರಾಜಮನೆತನದ ಮಹಾನ್ ಸಮಾಧಿಯಾದರೂ ಪುರಾತತ್ವ ವಾಸ್ತುಶಾಸ್ತ್ರ, ರೇಖಾಗಣಿತ ಮತ್ತು ಶಬ್ದವಿಜ್ಞಾನಕ್ಕೂ ಅತ್ಯುತ್ತಮ ಉದಾಹರಣೆ.

Video Top Stories