ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಶಿವಮೊಗ್ಗದಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಭರತ್‌ ನಾಗ್‌ ಎಂಬ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಶಿವಮೊಗ್ಗ: ಜಿಲ್ಲೆಯಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಕಾಂಗ್ರೆಸ್‌ ವಿದ್ಯಾರ್ಥಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಇವರು ಬಾರ್‌ವೊಂದರಲ್ಲಿ ಪಾರ್ಟಿ ಮಾಡಿ, ಬಳಿಕ ಅಲ್ಲೇ ಇದ್ದ ಇನ್ನೋಂದು ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಮೂಲಕ ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ. ಭರತ್‌ ನಾಗ್‌ ಎಂಬುವವರಿಗೆ ಇವರು ಥಳಿಸಿದ್ದಾರೆ. ಹಲ್ಲೆಗೊಳಗಾದ ಭರತ್‌ ನಾಗ್‌ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಶಿವಮೊಗ್ಗದ ಸವಾರ್ ಲೈನ್‌ ರಸ್ತೆಯ ಬಾರ್‌ ಮುಂದೆ ಘಟನೆ ನಡೆದಿದೆ. ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್‌ ನವುಲೆ, ಹರ್ಷಿತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಇದನ್ನೂ ವೀಕ್ಷಿಸಿ: ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

Related Video