Asianet Suvarna News Asianet Suvarna News

ಚಿಕ್ಕಮಗಳೂರು: ತಗಡಿನ ಶೆಡ್‌ನಲ್ಲೇ ಮಕ್ಕಳಿಗೆ ಪಾಠ, ಏನ್ ಮಾಡ್ತಿದ್ದಾರೆ ಅಧಿಕಾರಿಗಳು?

ಭೀಕರ ಪ್ರವಾಹದಿಂದ ನೆಲಕಚ್ಚಿದ ಸರ್ಕಾರಿ ಶಾಲೆ| ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಸರ್ಕಾರಿ ಶಾಲೆ| ಶಾಲಾ ಕಟ್ಟಡದ ಸ್ಥಿತಿ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ ಸಿದ್ದಮಾಜಿ ಸಿಎಂ ರಾಮಮಯ್ಯ| 

ಚಿಕ್ಕಮಗಳೂರು(ಫೆ.22): ಕಳೆದ ವರ್ಷ ಬಂದ ಭೀಕರ ಪ್ರವಾಹದಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಸರ್ಕಾರಿ ಶಾಲೆ ಸಂಪೂರ್ಣ ಬಿದ್ದು ಹೋಗಿತ್ತು. ಹೀಗಾಗಿ ಕಳೆದ 8 ತಿಂಗಳಿಂದ ತಗಡಿನ ಶೆಡ್‌ನಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. 

ಇದಕ್ಕೆ ಸ್ಪಂದಿಸಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ 6 ಲಕ್ಷ ರು. ಹಣ ಬಿಡುಗಡೆ ಮಾಡಿದ್ದರು. ಆದರೆ, ಶಾಲೆಯನ್ನ ಎಲ್ಲಿ ಕಟ್ಟಬೇಕು ಅಂತ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿದೆ. ಹೀಗಾಗಿ ಈ ಶಾಲೆ ಇನ್ನೂ ನಿರ್ಮಾಣವಾಗಿಲ್ಲ. ಶಾಲಾ ಕಟ್ಟಡದ ಸ್ಥಿತಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಮಯ್ಯ ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ.
 

Video Top Stories