
Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬ ವಿಚಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು (ಡಿ.18): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯ ಹಣ ಪಾವತಿಯಲ್ಲಿನ ವ್ಯತ್ಯಯ ಈಗ ವಿಧಾನಸಭೆಯ ರಣರಂಗದಲ್ಲಿ ದೊಡ್ಡ ಮಟ್ಟದ ಜಟಾಪಟಿಗೆ ಕಾರಣವಾಗಿದೆ. ಕಳೆದ ಎರಡು ತಿಂಗಳ (ಫೆಬ್ರವರಿ ಮತ್ತು ಮಾರ್ಚ್) ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬ ವಿಚಾರವಾಗಿ ವಿರೋಧ ಪಕ್ಷ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಅಂತಿಮವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಪ್ಪು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ.
Gruha Lakshmi Scheme: ಗೃಹಲಕ್ಷ್ಮೀ ಹಣವನ್ನು ಕನಕ ಪಂಚಮಿ ಕಾರ್ಯಕ್ರಮಕ್ಕೆ ದಾನ ಮಾಡಿದ ಬಾದಾಮಿ ಮಹಿಳೆ!
ಬುಧವಾರ ಸದನ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ನಾಯಕರು ಗೃಹಲಕ್ಷ್ಮಿ ಯೋಜನೆಯ ಲೆಕ್ಕಾಚಾರದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರು. "ಎಲ್ಲಾ ಕಂತುಗಳ ಹಣ ಬಿಡುಗಡೆಯಾಗಿದೆ" ಎಂದು ಈ ಹಿಂದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ಹೇಳಿಕೆಯನ್ನು ಸುಳ್ಳು ಎಂದು ಕರೆದ ವಿಪಕ್ಷ ನಾಯಕರು, ದಾಖಲೆಗಳನ್ನು ಪ್ರದರ್ಶಿಸಿ ಸರ್ಕಾರಕ್ಕೆ ಡಿಚ್ಚಿ ನೀಡಿದರು. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಸುಮಾರು 5,000 ಕೋಟಿ ರೂಪಾಯಿ ಹಣ ಇನ್ನೂ ಬಾಕಿ ಇರುವುದನ್ನು ಉಲ್ಲೇಖಿಸಿ 'ಕಮಲ ಪಡೆ' ಮುಗಿಬಿದ್ದಿತು.