Ramanagara Rain Updates; ಮಳೆಗೆ ಸಿಲುಕಿದವರ ರಕ್ಷಣೆಗೆ ಧಾವಿಸಿದ ಎಚ್‌ಡಿಕೆ
ರಾಮನಗರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ ಸಾರ್ವಜನಿಕರಲ್ಲಿ ಸಂಚಾರ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ.
ರಾಮನಗರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದು, ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ. ಬೆಂಗಳೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.