ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

First Published Apr 17, 2023, 12:00 PM IST | Last Updated Apr 17, 2023, 12:00 PM IST

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿಗೆ ಕರ್ನಾಟಕದ ಏಳು ಅದ್ಭುತಗಳು ಗರಿಮೆ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಘೋಷಣೆ ಮಾಡಿದ್ದು, ಹಂಪಿಗೆ ಮತ್ತೊಂದು ಗರಿ ದೊರೆತಿದೆ.ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟತಾಣಗಳಲ್ಲಿ ಹಂಪಿ ಒಂದು.ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾರಕಗಳು, ಜಗತ್ೊ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್‌ ನಿದರ್ಶನಗಳಿವೆ. 
 

Video Top Stories