Hassan: ಕಾಡ್ಗಿಚ್ಚಿಗೆ ಬೆಂದು ಹೋದ ಫಾರೆಸ್ಟ್ ಗಾರ್ಡ್ ಮೃತ: ಇಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

 ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

Share this Video
  • FB
  • Linkdin
  • Whatsapp

ಹಾಸನ ಜಿಲ್ಲೆಯ ಸಕಲೇಶಪುರದ ಕಾಡುಮನೆ ಎಸ್ಟೇಟ್‌'ನಲ್ಲಿ ಕಾಡ್ಗಿಚ್ಚು ನಂದಿಸಲು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೇ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ. ಬೆಂಕಿ ನಂದಿಸಲು ಡಿ.ಆರ್‌.ಎಫ್.ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಫೆ. 16ರಂದು ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯರು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್‌ ಅಂತ್ಯಕ್ರಿಯೆ ನಡೆಯಲಿದ್ದು, ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video