ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ
ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ ವಿಧಿಸಲಾಗಿದೆ.
ಉತ್ತರ ಕನ್ನಡ: ಕಾರವಾರದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ (Landslide in Ankola) ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ರಕ್ಷಣಾ ಕಾರ್ಯದಲ್ಲೂ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಅವರನ್ನು ತಡೆಯಲಾಗಿದೆಯಂತೆ. ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ(Media ban) ವಿಧಿಸಲಾಗಿದೆ. ಮಾಧ್ಯಮಗಳಿಗೆ ಜಿಲ್ಲಾಡಳಿತ ಬ್ಯಾರಿಕೇಡ್ ಹಾಕಿ ತಡೆ ಹಿಡಿದಿದೆ. ಹೆಚ್‌ಡಿಕೆ ವೀಕ್ಷಣೆ ಸುದ್ದಿ ಮಾಡದಂತೆ ತಡೆಯಲಾಗಿದೆ. ಹೆಚ್‌ಡಿಕೆ ಭೇಟಿ ಸುದ್ದಿ ಮಾಡದಂತೆ ತಡೆಯಲು ಯತ್ನಿಸಲಾಗಿದೆ. ರಾಜ್ಯ ಸರ್ಕಾರದಿಂದ ರಕ್ಷಣಾ ಕಾರ್ಯದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ನಿನ್ನೆವರೆಗೂ ಅವಕಾಶ ನೀಡಿದ್ದ ಜಿಲ್ಲಾಡಳಿತ, ಹೆಚ್‌ಡಿಕೆ ಭೇಟಿ ಹಿನ್ನೆಲೆ ಇಂದು ಏಕಾಏಕಿ ತಡೆ ನೀಡಿದೆ.
ಇದನ್ನೂ ವೀಕ್ಷಿಸಿ: ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಗ್ಯಾಂಗ್‌ಗೆ ಸಂಕಷ್ಟ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷಾ ವರದಿ