Hijab Row ಯುವತಿಯರ ಪರವಾಗಿ ಬಂದು ವಾಗ್ವಾದಕ್ಕಿಳಿದ ಯುವಕರು ಪೊಲೀಸ್ ವಶಕ್ಕೆ
ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಬೆಳಗಾವಿಯಲ್ಲೂ ಹಿಜಾಬ್ ಕಿಚ್ಚು ಜೋರಾಗಿದೆ.
ಬೆಳಗಾವಿ, (ಫೆ.17): ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಬೆಳಗಾವಿಯಲ್ಲೂ ಹಿಜಾಬ್ ಕಿಚ್ಚು ಜೋರಾಗಿದೆ.
Hijab Row ಗೃಹ ಸಚಿವರ ತವರು ಜಿಲ್ಲೆಯಲ್ಲೇ ತಾರಕಕ್ಕೇರಿದ ಹಿಜಾಬ್ ಕಿಚ್ಚು
ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. ಆದ್ರೆ, ಇತ್ತ ಹಿಜಾಬ್‌ಗೆ ಅವಕಾಶ ಕೊಡಿ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇನ್ನು ಬೆಳಗಾವಿಯಲ್ಲಿ ಹಿಜಾಬ್‌ಗಾಗಿ ವಿದ್ಯಾರ್ಥಿನಿಯರು ನಡೆಸುತ್ತಿದ್ದ ಪ್ರತಿಭಟನೆಗೆ ಯುವಕರ ಗುಂಪೊಂದು ಸಾಥ್ ಕೊಟ್ಟಿದೆ. ಆದ್ರೆ, ಆ ಗುಂಪು ಪೊಲೀಸರ ಜತೆ ವಾಗ್ದಾದಕ್ಕಿಳಿದೆ. ಇದರಿಂದ ಪೊಲೀಸರು ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.