ನಾಳೆ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಹುಕ್ಕೇರಿ ಹಿರೇಮಠದಿಂದ ಹೋಳಿಗೆ ಊಟ

ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಬೆಳಗಾವಿ ಸಿದ್ಧವಾಗಿದ್ದು, ಹುಕ್ಕೇರಿ ಹಿರೇಮಠದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ನಾಳೆ ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವ ಕನ್ನಡಿಗರಿಗೆ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಊಟದಲ್ಲಿ ಹೋಳಿಗೆ ನೀಡಲಾಗುತ್ತಿದ್ದು, ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಭರದಿಂದ ಹೋಳಿಗೆ ಸಿದ್ಧವಾಗುತ್ತಿವೆ. ಹುಕ್ಕೇರಿಯ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹೋಳಿಗೆ ದಾಸೋಹ ಏರ್ಪಡಿಸಲಾಗಿದ್ದು, ನಾಳೆ ಹೋಳಿಗೆ ದಾಸೋಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಚಿತ್ರ ನಟ ಸಾಯಿಕುಮಾರ್ ಚಾಲನೆ ನೀಡಲಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆ ಚುಕ್ಕಾಣಿ ಬಿಜೆಪಿಗೆ!?

Related Video