ಭಾರತವನ್ನು ವಿಶ್ವದ ನಂ. 1 ದೇಶವನ್ನಾಗಿ ಮಾಡಿ: ಅಮಿತ್ ಶಾ ಕರೆ
ಖೇಲೋ ಇಂಡಿಯಾ ಯುವಕರ ಸಾಮರ್ಥ್ಯ ಪ್ರದರ್ಶನಕ್ಕೆ ಅಗತ್ಯ ವೇದಿಕೆ ಕಲ್ಪಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಯುವ ಸಬಲೀಕರಣದತ್ತ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜು ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ನೀವು ದೇಶಕ್ಕಾಗಿ ಬದುಕಿ. ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡಿ ಎಂದು ಕರೆ ನೀಡಿದ್ದಾರೆ. ಭಾರತ ಸ್ಟಾರ್ಟ್ ಅಪ್ ಕ್ಷೇತ್ರದಲ್ಲಿ 70,000 ಸ್ಟಾರ್ಟ್ ಅಪ್ ಆರಂಭವಾಗಿದೆ. ಅದರಲ್ಲಿ ಶೇ. 30ರಷ್ಟು ಯುವಕರು ಸ್ಟಾರ್ಟ್ ಅಪ್ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು. ಉತ್ಪಾದನಾ ಕ್ಷೇತ್ರದಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೆ ಬಂದಿದೆ ಎಂದು ತಿಳಿಸಿದರು.
BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?