Karwar: ಹಾಸ್ಟೆಲ್‌ನಲ್ಲಿ ಕಳಪೆ ಮಟ್ಟದ ಆಹಾರ: ತಟ್ಟೆಯೊಂದಿಗೆ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
* ನಂದನಗದ್ದಾದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ
* ಕೊಡುವ ಊಟ ಮಾಡಲಾಗದೇ ಹಲವು ಬಾರಿ ಉಪವಾಸ ಕೂರುವ ಪರಿಸ್ಥಿತಿ
* ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಂದ ಭರವಸೆ
ಕಾರವಾರ(ಡಿ.18): ಕಳಪೆ ಮಟ್ಟದ ಆಹಾರ ನೀಡುವುದನ್ನು ವಿರೋಧಿಸಿ ಕಾರವಾರ ನಂದನಗದ್ದಾದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸುಮಾರು 30-40 ವಿದ್ಯಾರ್ಥಿಗಳಿರುವ ಈ ವಿದ್ಯಾರ್ಥಿ ನಿಲಯದಲ್ಲಿ ಸಾಕಷ್ಟು ಸಮಯಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುತ್ತಿರಲಿಲ್ಲ. ಈ ಕಾರಣದಿಂದ ಇಂದು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ ನೇತೃತ್ವದಲ್ಲಿ ವಿದ್ಯಾರ್ಥಿಗಳು ಅನ್ನ ಸಾಂಬಾರು ಬಡಿಸಿದ ತಟ್ಟೆಯೊಂದಿಗೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
Shivamogga : ಕೇಳುವವರೇ ಇಲ್ಲ ಶರಾವತಿ ಹಿನ್ನೀರಿನ ದ್ವೀಪವಾಸಿಗಳ ಗೋಳು!
ವಿದ್ಯಾರ್ಥಿ ನಿಲಯದಲ್ಲಿ ಗುಣಮಟ್ಟದ ಊಟ ನೀಡುತ್ತಿಲ್ಲ, ಬೆಳಿಗ್ಗೆ ನೀಡುವ ತಿಂಡಿ ಸಹ ಸರಿಯಾಗಿಲ್ಲ, ಕೊಡುವ ಊಟ ಮಾಡಲಾಗದೇ ಹಲವು ಬಾರಿ ಉಪವಾಸ ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಆಗಬೇಕೆಂದು ವಿದ್ಯಾರ್ಥಿಗಳು ಹಾಸ್ಟೆಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಸ್ಥಳಕ್ಕೆ ಬಂದ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಸ್ಥಗಿತಗೊಳಿಸಿದರು.