ಬೀದರ್: ಊಟದಲ್ಲಿ ಹುಳು ಪ್ರತ್ಯಕ್ಷ, ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ಥಳಿತ!

ವಸತಿ ಶಾಲೆ ಆವರಣದಲ್ಲೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ನಿತ್ಯ ಕಳಪೆ ಆಹಾರ ನೀಡುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿಗಳು ಊಟದ ಕುರಿತು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ವಾರ್ಡನ್‌ ಅಮಾನುಷವಾಗಿ ಥಳಿಸಿದ್ದಾರೆ. 

First Published Dec 11, 2024, 5:14 PM IST | Last Updated Dec 11, 2024, 5:14 PM IST

ಬೀದರ್(ಡಿ.11):  ಊಟದಲ್ಲಿ ಹುಳು ಪ್ರತ್ಯಕ್ಷವಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ವಾರ್ಡನ್‌ ಥಳಿಸಿದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. 
ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೇಲೆ ವಾರ್ಡನ್‌ ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪ್ರಿನ್ಸಿಪಾಲ್ ಹಾಗೂ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಪ್ರಿನ್ಸಿಪಾಲ್ ಭಗವಂತ ಕಾಂಬಳೆ ಹಾಗೂ ವಾರ್ಡನ್ ಶಿವಕುಮಾರ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.

ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

ವಸತಿ ಶಾಲೆ ಆವರಣದಲ್ಲೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ನಿತ್ಯ ಕಳಪೆ ಆಹಾರ ನೀಡುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿಗಳು ಊಟದ ಕುರಿತು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ವಾರ್ಡನ್‌ ಅಮಾನುಷವಾಗಿ ಥಳಿಸಿದ್ದಾರೆ. ಈ ಮೊರಾರ್ಜಿ ವಸತಿ ಶಾಲೆಯಲ್ಲಿ  6 ರಿಂದ 10 ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.