ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ, ಬಾಡಿಗೆಗೆ ಕೊಡಂಗಿಲ್ಲ: ಖಾಕಿ ನೋಟಿಸ್
ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಹುಬ್ಬಳ್ಳಿ, (ಆಗಸ್ಟ್.26): ಹಿಂದೂಗಳ ಹಬ್ಬಗಳಲ್ಲಿ ಅದ್ದೂರಿ ಹಾಗೂ ಕಲರ್ ಪುಲ್ ಹಬ್ಬ ಅಂದರೆ ಅದು ದೀಪಾವಳಿ ಹಾಗೂ ಗೌರಿ ಗಣೇಶ. ಇದೀಗ ಗಣೇಶ ಹಬ್ಬ ಮತ್ತೆ ಬಂದಿದೆ.ಇದಕ್ಕಾಗಿ ಮಾರುಟ್ಟೆಗೆ ಕಲರ್-ಕಲರ್ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.
ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಮೊದಲು, ಈ ವಿಷಯ ನೆನಪಿರಲಿ!
ಮತ್ತೊಂದೆಡೆ ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.