ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

 ಅಕ್ಕಿ ದಂಧೆ ನಡೆಸುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಗದಗ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.

Share this Video
  • FB
  • Linkdin
  • Whatsapp

ಗದಗ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೆ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗ್ರಾಮಗಳ ಮನೆ ಮನೆಗೆ ತೆರಳಿ ಅಕ್ಕಿ‌ ಖರೀದಿಸುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 42 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಓರ್ವ ಅರೆಸ್ಟ್ ಆಗಿದ್ದಾನೆ. ಇದೀಗ ಅಕ್ಕಿ‌ ದಂಧೆಕೋರರಲ್ಲಿ‌ನಡುಕ ಶುರುವಾಗಿದೆ. ಶರಣಪ್ಪ ಕುಂಬಾರ್‌ ಎಂಬಾಂತ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ವಿರುದ್ಧ ಸಿಆರ್‌ಪಿಸಿ 107, 151 ಅಡಿ ಪ್ರಕರಣ ದಾಖಲಿಸಲಾಗಿದೆ. ಮುತ್ತು ಪೂಜಾರ್‌, ರಾಜು ಮಲ್ಜಿ, ದದ್ದು ಸೇರಿ 42 ಜನರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ಅಕ್ಕಿ ದಂಧೆಯ ಕಿಂಗ್‌ ಪಿನ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ವೀಕ್ಷಿಸಿ: ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

Related Video