ಪ್ರಯಾಣಿಕರಿಗೆ ಬಿಗ್ ರಿಲೀಫ್: ಸೋಮವಾರದಿಂದ BMTC, KSRTC ಬಸ್ ಸಂಚಾರ ಶುರು..?
ಮೇ.18 ರಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆ|ಹೊರ ಜಿಲ್ಲೆಗಳಿಗೆ ಬಸ್ ಸಂಚಾರ ಶುರುವಾಗುವ ಸಾಧ್ಯತೆ| ಸಾರಿಗೆ ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡುತ್ತಿರುವ ಕೆಎಸ್‌ಆರ್‌ಟಿಸಿ| ಕೇಂದ್ರದಿಮದ ಮಾರ್ಗಸೂಚಿ ಬಂದ ನಂತರವೇ ಬಸ್ ಸಂಚಾರದ ಬಗ್ಗೆ ನಿರ್ಧಾರ|
ಬೆಂಗಳೂರು(ಮೇ.16): ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೊರ ಜಿಲ್ಲೆಗಳಿಗೆ ಬಸ್ ಸಂಚಾರ ಶುರುವಾಗುವ ಸಾಧ್ಯತೆ ಇದೆ. ಈ ಸಂಬಂಧ ಬಸ್‌ಗಳನ್ನ ರೆಡಿ ಮಾಡಿಕೊಳ್ಳಲು ಎಲ್ಲ ಡಿಪೋಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ಕೊಟ್ಟಿದೆ.
ಕಾರ್ಮಿಕರಿಗಾಗಿ ರಸ್ತೆ ಬದಿಯಲ್ಲೇ ಮಲಗಿದ ಶಾಸಕ ನಡಹಳ್ಳಿ..!
ಈಗಾಗಲೇ ಸಾರಿಗೆ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನ ಮಾಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಬಂದ ನಂತರವೇ ಬಸ್ ಸಂಚಾರದ ಬಗ್ಗೆ ಕೆಎಸ್‌ಆರ್‌ಟಿಸಿ ನಿರ್ಧರಿಸಲಿದೆ.