ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಧಾನಸೌಧದ ಮುಂಭಾಗ ಗಣ್ಯರಿಂದ ಯೋಗಾಭ್ಯಾಸ

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ವಿಧಾನಸೌಧದ ಮುಂಭಾಗ ಆಚರಿಸಲಾಯಿತು.
 

Share this Video
  • FB
  • Linkdin
  • Whatsapp

ಬೆಂಗಳೂರು: ಆಯುಷ್ ಇಲಾಖೆ ವತಿಯಿಂದ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಧಾನಸೌಧದಲ್ಲಿ ಆಚರಿಸಲಾಯಿತು. ವಿಧಾನಸೌಧದಲ್ಲಿ ಯೋಗಾಭ್ಯಾಸವನ್ನು ಮಾಡುವ ಮೂಲಕ ಗಣ್ಯರು ಗಮನಸೆಳೆದರು. ಆಯುಷ್ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸ್ಪೀಕರ್ ಯು.ಟಿ ಖಾದರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಕ್ರಿಕೆಟಿಗ ವಿ.ಕೆ ವೆಂಕಟೇಶ್ ಪ್ರಸಾದ್, ಅಂಜು ಬಾಬಿ ಜಾರ್ಜ್, ನಟಿ ಭಾವನಾ ಭಾಗಿಯಾಗಿದ್ದರು. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಸುದೇವ ಕುಟುಂಬಕಂ ಫೋಷವಾಕ್ಯದಡಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಇದನ್ನೂ ವೀಕ್ಷಿಸಿ: International Yoga Day: ರಾಜ್ಯದೆಲ್ಲೆಡೆ ಯೋಗಪಟುಗಳಿಂದ ಯೋಗಾಭ್ಯಾಸ

Related Video