ಆನ್‌ಲೈನ್ ಪರೀಕ್ಷೆ ರದ್ದತಿಗೆ ಆಗ್ರಹ: ITI ವಿದ್ಯಾರ್ಥಿಗಳಿಂದ ಧರಣಿ
ಆನ್‌ಲೈನ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ| ಬಾಗಲಕೋಟೆಯಲ್ಲಿ ನಡೆದ ಧರಣಿ| ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಐಟಿಐ ವಿದ್ಯಾರ್ಥಿಗಳ ಪ್ರತಿಭಟನೆ|ಸರ್ಕಾರದ ನಡೆ ಖಂಡಿಸಿ ವಿದ್ಯಾರ್ಥಿಗಳ ಧಿಕ್ಕಾರ|
ಬಾಗಲಕೋಟೆ[ಜ.22]:ಆನ್‌ಲೈನ್ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಬಾಗಲಕೋಟೆ ನಗರದಲ್ಲಿ ಇಂದು[ಬುಧವಾರ] ನಡೆದಿದೆ. ನವನಗರದ ತಹಶೀಲ್ದಾರ ಕಚೇರಿಯಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ.
ಜಿಲ್ಲಾ ವ್ಯಾಪ್ತಿಯ ಎಲ್ಲ ಐಟಿಐ ಕಾಲೇಜ್ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರವ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೆರವಣಿಗೆಯ ಮೂಲಕ ನವಗರದಲ್ಲಿರುವ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸರ್ಕಾರದ ನಡೆ ಖಂಡಿಸಿ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದ್ದಾರೆ.