Kalaburagi: ಮಹಿಳಾ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
ಕಲಬುರಗಿಯ ಮುಕ್ತಾಂಬಿಕಾ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹಪಾಠಿಗಳು ಕಾಲೇಜಿಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಲಬುರಗಿ (ಡಿ.5):ಶರಣಬಸವೇಶ್ವರ ವಿದ್ಯಾವರ್ದಕ ಸಂಸ್ಥೆಯ ಮಹಿಳಾ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿಯ ಮುಕ್ತಾಂಬಿಕಾ ಹಾಸ್ಟೆಲ್‌ನಲ್ಲಿ ದ್ವಿತಿಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಕ್ತಾಂಬಿಕಾ PU ಕಾಲೇಜು ವಿದ್ಯಾರ್ಥಿನಿ ನಮೇರಾ ಮಕಾನದಾರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಮಿರಾ ಆಳಂದ ಪಟ್ಟಣದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿಯಾಗಿದ್ದಳು.
ದೇವೇಂದ್ರ vs ಏಕನಾಥ್ vs ಅಜಿತ್: ಮಹಾಯುತಿಯ ತ್ರಿಮೂರ್ತಿಗಳ ಪೈಕಿ ಅತ್ಯಂತ ಶ್ರೀಮಂತರು ಯಾರು?
ಸಹಪಾಠಿಗಳೆಲ್ಲಾ ಕಾಲೇಜಿಗೆ ಹೋಗಿದ್ದಾಗ ಹಾಸ್ಟೆಲ್‌ನ ತನ್ನ ಕೋಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲಬುರಗಿಯ ಆರ್.ಜಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ. ಆತ್ಮಹತ್ಯೆಗೆ ಕಾರಣ ಇನ್ನೂ ಅನ್ನೋದು ಗೊತ್ತಾಗಿಲ್ಲ.