
ಕಮಲ ನಗರದಲ್ಲಿ ಅದ್ದೂರಿಯಾಗಿ ನಡೆದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ಬೀದರ್ ಜಿಲ್ಲೆಯ ಕಮಲನಗರದಲ್ಲಿ ಪ್ರಥಮ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಬೀದರ್ ಜಿಲ್ಲೆಯ ಕಮಲ ನಗರದಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಈ ವೇಳೆ ಮಾತನಾಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್, ಕಮಲನಗರದಲ್ಲಿ ಸುಸಜ್ಜಿತವಾದ ಕನ್ನಡ ಭವನ ನಿರ್ಮಿಸುವುದಾಗಿ ಘೋಷಣೆ ಮಾಡಿದ್ದಾರೆ. ಕನ್ನಡ ಕೆಲಸಗಳಿಗೆ ನಾನು ಸದಾ ಸಿದ್ಧನಿದ್ದೇನೆ. ಕನ್ನಡ ಚಟುವಟಿಕೆಗಳು ಚುರುಕಾಗಿ ನಡೆಯುತ್ತಿದೆ ನನ್ನ ಸಹಕಾರ ಸದಾ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ