Asianet Suvarna News Asianet Suvarna News

ಮೈತ್ರಿ ಸರ್ಕಾರದ ಸಂಖ್ಯಾಬಲ ಕಡಿಮೆಗೊಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್..!

ರಾಜ್ಯದಲ್ಲಿ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕೆಂದು ಹಾತೊರೆಯುತ್ತಿರುವ ಬಿಜೆಪಿ ಚಿಂಚೋಳಿ ವಿಧಾನಸಭಾ ಉಪಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ ರೂಪಿಸಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಸಂಖ್ಯಾಬಲವನ್ನು ಕಡಿಮೆಗೊಳಿಸಲು ಶತಪ್ರಯತ್ನ ಮಾಡುತ್ತಿರುವ ಬಿಜೆಪಿ, ಹೇಗಾದರೂ ಮಾಡಿ ಚಿಂಚೋಳಿ ವಿಧಾನಸಭೆ ಉಪಚುನಾವಣೆಯನ್ನು ಗೆಲ್ಲಲು ನಾನಾ ತಂತ್ರಗಳನ್ನು ಹೆಣೆದಿದೆ. ಚಿಂಚೋಳಿ ಬೈ ಎಲೆಕ್ಷನ್‌ನನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಬಿಜೆಪಿ ಗೆಲ್ಲಲು ಮಾಸ್ಟರ್ ಪ್ಲಾನ್ ರೂಪಿಸಿದೆ.

Video Top Stories