ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

Share this Video
  • FB
  • Linkdin
  • Whatsapp

ಬೀದರ್ (ಸೆ. 17): ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

ಧಾರವಾಡ: ಸಿಬಿಐ ವಿಚಾರಣೆಗೆ ಬಂದ ಯೋಗೇಶ್ ಗೌಡ ಪತ್ನಿ

ಮನೆಯಲ್ಲಿರುವ ಧವಸ, ಧಾನ್ಯಗಳನ್ನು ಸುರಕ್ಷಿತ ಸ್ಥಳಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಿಕ್ಕಾಪಟ್ಟೆ ನೀರು ಇರುವುದರಿಂದ ಮುಳುಗಿ ಹೋಗುವ ಅಪಾಯವೂ ಇದೆ. ಆದರೆ ಅದ್ಯಾವುದನ್ನೂ ಲೆಕ್ಕಿಸದೇ ಮನೆಯಲ್ಲಿರುವ ಧಾನ್ಯಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಪ್ರತಿವರ್ಷ ಮಳೆಗಾಲದಲ್ಲಿ ಜನರು ಇದೇ ರೀತಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಬೇಕೆಂದು ಜನರು ಆಗ್ರಹಿಸಿದ್ದಾರೆ. 

Related Video