ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಓರ್ವ ವ್ಯಕ್ತಿಯಿಂದ ಅರೆಬೆತ್ತಲೆ ಪ್ರತಿಭಟನೆ
ಕೋಲಾರದ ಬಂಗಾರಪೇಟೆ ತಹಶೀಲ್ದಾರ್ ಕಚೇರಿ ಮುಂಭಾಗ ಓರ್ವ ವ್ಯಕ್ತ ಅರೆಬೆತ್ತಲೆ ಪ್ರತಿಭಟನೆಗೆ ಕುಳಿತ್ತಿದ್ದಾರೆ.
ಕೋಲಾರ, (ಡಿ.16): ಕೋಲಾರದ ಬಂಗಾರಪೇಟೆ ತಹಶೀಲ್ದಾರ್ ಕಚೇರಿ ಮುಂಭಾಗ ಓರ್ವ ವ್ಯಕ್ತ ಅರೆಬೆತ್ತಲೆ ಪ್ರತಿಭಟನೆಗೆ ಕುಳಿತ್ತಿದ್ದಾರೆ.
ಜೋಡೇನಹಳ್ಳಿ ಗ್ರಾಮದ ಲಕ್ಷ್ಮೀನಾರಾಯಣ ಪ್ರಸಾದ್ ಎಂಬ ವ್ಯಕ್ತಿ ಬಾಯಿಗೆ, ತಲೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡುತ್ತಿದ್ದಾನೆ. ಗ್ರಾಮ ಪಂಚಾಯಿತಿ ಚುನಾವಣೆಗೆ ವರಲಕ್ಷ್ಮಿ ಎಂಬ ಮಹಿಳೆ ನಕಲಿ ಜಾತಿ ಪ್ರಮಾಣ ಸೃಷ್ಟಿಸಿರುವ ಆರೋಪ ಹಿನ್ನೆಲೆಯಲ್ಲಿ ಕಾನೂನು ರೀತಿ ಕ್ರಮ ವಹಿಸುವಂತೆ ತಹಶೀಲ್ದಾರ್ ಗೆ ಆಗ್ರಹಿಸಿದ್ದಾರೆ.