Asianet Suvarna News Asianet Suvarna News

ಸಾರಿಗೆ ಬಸ್‌ಗೆ ಸಿಲುಕಿ ಮಹಿಳೆ ಸಾವು: ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ.
 

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಮಹಿಳೆ ಸಾವಿಗೀಡಾಗಿರುವ ಘಟನೆ ಮಂಡ್ಯದ(Mandya) ಕೆಎಸ್‌ಆರ್‌ಟಿಸಿ(KSRTC) ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಮಹಿಳೆ(woman) ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ(Bengaluru) ಪೂಜಾ ಭಾರತಿ ಮೃತಪಟ್ಟಿದ್ದ ಮಹಿಳೆಯಾಗಿದ್ದಾರೆ. ಬಸ್ ನಿಲ್ದಾಣದ ಒಳಗಡೆ ಪ್ರವೇಶ ಮಾಡುವಾಗ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. KSRTC ಬಸ್ ನಿಲ್ದಾಣದ ಒಳಗಡೆ ಮಹಿಳೆ ನಡೆದುಕೊಂಡು ಬರುತ್ತಿದ್ದರು. ಏಕಾಏಕಿ ಮಹಿಳೆಗೆ ಬಸ್‌ ಗುದ್ದಿದ ಪರಿಣಾಮ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ವ್ಹೀಲ್‌ಚೇರ್‌ನಲ್ಲೇ ಅಯೋಧ್ಯೆಗೆ ಹೊರಟ ಸಾಹಸಿ: ರಾಮನ ಕಾಣುವ ಕನಸು ಕೊನೆಗೂ ನನಸಾಗುತ್ತಾ ?

Video Top Stories