KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದು, ಮಾರ್ಚ್‌ 1ರಿಂದ ಮತ್ತೆ ಸಾರಿಗೆ ಸಂಪೂರ್ಣ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

Share this Video
  • FB
  • Linkdin
  • Whatsapp

7ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೊಮ್ಮೆ ಪ್ರತಿಭಟನೆ ನಡೆಸಲು ತಯಾರಾಗಿದ್ದು, ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದಾರೆ. ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಈ ಬಾರಿ ಕುಟುಂಬ ಸಮೇತ ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. 7ನೇ ವೇತನ ಆಯೋಗ ನೀಡುವುದಾಗಿ ಭರವಸೆ ನೀಡಿದ್ದ ರಾಜ್ಯ ಸರ್ಕಾರ, ಬಜೆಟ್‌'ನಲ್ಲಿ ಸಾರಿಗೆ ಸಿಬ್ಬಂದಿಯನ್ನು ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದೆ.

Related Video