ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತು ತೆಗೆಯಲು ಹೋಗಿ ಸಾವು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತು ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

First Published Nov 2, 2022, 5:57 PM IST | Last Updated Nov 2, 2022, 5:57 PM IST

ಹಾಸನ: ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತು ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ಮೇಲೆ ಬಟ್ಟೆಯೊಂದು ಬಿದ್ದಿದ್ದು, ಇದನ್ನು ತೆಗೆಯುವ ಸಲುವಾಗಿ ಕೈಗೆ ಬಟ್ಟೆ ಸುತ್ತಿಕೊಂಡು ಮಲ್ಲಪ್ಪ ಅವರು ಕೋಲೊಂದರಿಂದ ವಿದ್ಯುತ್ ತಂತಿಯನ್ನು ಸ್ಪರ್ಶಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಹಠಾತ್ ಆಗಿ ವಿದ್ಯುತ್ ಹರಿದಿದ್ದು, ಅವರು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಈ ಭಯಾನಕ ದೃಶ್ಯ ಮನೆ ಸಮೀಪ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ ಭಯ ಮೂಡಿಸುತ್ತಿದೆ. 
 

Video Top Stories