Mandya Rape and Murder; ಮೃತ ಬಾಲಕಿ ಮನೆಗೆ ಸಂಸದೆ ಸುಮಲತಾ ಭೇಟಿ

ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ  ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಮಂಡ್ಯ (ಅ.16): ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಸಾಂತ್ವಾನದ ವೇಳೆ ಬಾಲಕಿಯ ತಾಯಿ ತಬ್ಬಿ ಕಣ್ಣೀರಿಟ್ಟ ಸುಮಲತಾ. ಈ ಘಟನೆ ನಡೆಯಬಾರದಿತ್ತು. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ‌. ಅವನಿಗೆ ಗಲ್ಲು ಶಿಕ್ಚೆಯೇ ಆಗಬೇಕು. ನಾನು ಸಿಎಂ ಜೊತೆ ಮಾತನಾಡಿದ್ದೇನೆ. 10 ಲಕ್ಷ ಪರಿಹಾರ ನೀಡಿದ್ದಾರೆ. ಹೋದ ಮಗಳನ್ನು ನಾವು ಕೊಡಲು ಸಾಧ್ಯ ಇಲ್ಲ ಎಂದು ಕಣ್ಣೀರಿಟ್ಟ ಸುಮಲತಾ.

ಮಳವಳ್ಳಿ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿಯಿಂದ 10 ಲಕ್ಷ ಪರಿಹಾರ ಘೋಷಣೆ

ಸುಮಲತಾ ಮುಂದೆ ಕಣ್ಣಿರಿಡುತ್ತಾ ಅಳಲು ತೋಡಿಕೊಂಡ ಕುಟುಂಬಸ್ಥರು. ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ. ಈ ವೇಳೆ ಸಂಸತ್ ನಲ್ಲಿ ಧನಿ ಎತ್ತುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯ ಕೇಳಿ ಬರುತ್ತಿದೆ.

Related Video