Asianet Suvarna News Asianet Suvarna News

ಮೀನುಗಾರರಿಗೆ ಇನ್ಮುಂದೆ ಸಮುದ್ರದಲ್ಲೇ ಸಿಗಲಿದೆ ಸಿಹಿ ನೀರು!

Sep 6, 2021, 9:54 AM IST

ಮಂಗಳೂರು (ಸೆ. 06): ಆಳಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರು 10ಕ್ಕೂ ಹೆಚ್ಚು ದಿನಗಳ ಕಾಲ ಸಮುದ್ರದಲ್ಲೇ ಇರುತ್ತಾರೆ.  ಈ ಸಂದರ್ಭದಲ್ಲಿ ಸಮುದ್ರದ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಒಂದು ವಾರದ ಬಳಕೆಗೆ ಬೇಕಾದ ಸಿಹಿ ನೀರನ್ನು ಹೋಗುವಾಗಲೇ ಬೋಟ್‌ನಲ್ಲಿ ಸಂಗ್ರಹಿಸಿ ಕೊಂಡೊಯ್ಯುತ್ತಾರೆ. ಆದ್ರೆ ಇನ್ಮುಂದೆ ಈ ರೀತಿ ಕೊಂಡೊಯ್ಯುವ ಬದಲು ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರಾಗಿ ಪರಿವರ್ತಿಸುವ ಆಸ್ಟ್ರೇಲಿಯಾದ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಜಾರಿಗೊಳಿಸಲಾಗಿದೆ.

ಬೀದರ್ : ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

ಈ ತಂತ್ರಜ್ಞಾನ ಅಮೇರಿಕಾ, ಯುರೂಪ್‌ನಲ್ಲಿ ಈಗಾಗಲೇ ಬಳಕೆಯಲ್ಲಿದೆ. ಆಸ್ಟ್ರೇಲಿಯಾ ಮೂಲದ ರೆಯಾನ್ಸ್ ಎಂಬ ಕಂಪೆನಿ ಈ ಕಿಟ್‌ನ್ನು ತಯಾರಿಸುತ್ತಿದೆ. ಇಲ್ಲಿ ಬೋಟ್ ಸಂಚರಿಸುವಾಗಲೇ ಉಪ್ಪು ನೀರನ್ನು ಪೈಪ್ ಮೂಲಕ ಸಂಗ್ರಹಿಸಲಾಗುತ್ತೆ.  ಪೈಪ್‌ನಿಂದ ಬಂದ ಉಪ್ಪು ನೀರು ಶುದ್ದೀಕರಿಸುವ ಯಂತ್ರದ ಒಳಗೆ ಪಂಪ್ ಆಗಿ ಬಳಿಕ ಫಿಲ್ಟರ್ ಆಗಿ ಸಿಹಿ ನೀರು ಇನ್ನೊಂದು ಪೈಪ್ ಮೂಲಕ ಹೊರ ಬರುತ್ತೆ. ಈ ರೀತಿ ಗಂಟೆಗೆ 168 ಲೀಟರ್ ನೀರು ಫಿಲ್ಟರ್ ಆಗಲಿದ್ದು, ದಿನವೊಂದಕ್ಕೆ 2000 ಲೀ ನೀರು ಫಿಲ್ಟರ್ ಆಗುತ್ತೆ.