ನೆಲ, ಜಲ, ಭಾಷೆಯ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗುತ್ತೇವೆ: ಶ್ರೀರಾಮುಲು
ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ಮೇಲೆ ಮತ್ತೆ ಗಡಿ ಕ್ಯಾತೆ ತೆಗೆದಿದ್ದಾರೆ| ನೆಲ, ಜಲ, ಭಾಷೆಯ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗುತ್ತೇವೆ| ಈ ಕುರಿತು ನಾವೆಲ್ಲಾ ಒಂದಾಗಿ ಹೋರಾಡುತ್ತೇವೆ| ರಾಜ್ಯ ಸರ್ಕಾರ ಇದನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ| ಕೇಂದ್ರ ಸರ್ಕಾರ ನಾಯಕರು ಕೂಡ ಕಣ್ಣಿಟ್ಟಿದ್ದಾರೆ|
ಬೆಂಗಳೂರು(ಡಿ.30): ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ಮೇಲೆ ಮತ್ತೆ ಗಡಿ ಕ್ಯಾತೆ ತೆಗೆದಿದ್ದಾರೆ. ನೆಲ, ಜಲ, ಭಾಷೆಯ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗುತ್ತೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ನಾವೆಲ್ಲಾ ಒಂದಾಗಿ ಹೋರಾಡುತ್ತೇವೆ. ರಾಜ್ಯ ಸರ್ಕಾರ ಇದರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಕೇಂದ್ರ ಸರ್ಕಾರದ ನಾಯಕರು ಕೂಡ ಕಣ್ಣಿಟ್ಟಿದ್ದಾರೆ.
ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಉದ್ಧಟತನ ತೋರಿದ್ದಾರೆ. ಈ ವಿಷಯದಲ್ಲಿ ನಾವು ಸಹಿಸುವಂತ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ನಾವೆಲ್ಲಾ ಒಂದಾಗಿ ಹೋರಾಡುತ್ತೇವೆ ಎಂದು ಹೇಳಿದ್ದಾರೆ.