Asianet Suvarna News Asianet Suvarna News

ಭಾರೀ ಮಳೆಗೆ ತತ್ತರಿಸಿದ ಬೀದರ್‌: ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಚವ್ಹಾಣ್‌ ಭೇಟಿ

Sep 9, 2021, 10:56 AM IST

ಬೀದರ್‌(ಸೆ.09): ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಸತತವಾಗಿ ಸುರಿದ ಭಾರೀ ಮಳೆಗೆ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಕೋಟ್ಯಂತರ ರೂ. ಬೆಲೆ ಬಾಳುವ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೀಗಾಗಿ ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ರೀತಿಯಲ್ಲಿ ಸ್ಪಂದಿಸದ ಅಧಿಕಾರಿಗಳಿಗೆ ಸಚಿವರು ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಹಾನಿ ಪ್ರದೇಶಗಳ ಸಮೀಕ್ಷೆ ನಡೆಸುವಂತೆ ಸಚಿವ  ಚವ್ಹಾಣ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬಂಗುಡೆ ಬೇಕಾ, ಮಾಂಜಿ ಬೇಕಾ.? ಕರಾವಳಿ ತುಂಬೆಲ್ಲಾ ತಾಜಾ ಮೀನಿನ ಘಮಘಮ!