ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

* ಹಸಿರ ಹೊದಿಕೆ, ಮಂಜಿನ ಮುಸುಕಿನಲ್ಲಿ ಅಡಗಿದ ಗುಮ್ಮಟಗಳು
* ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
* ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆ
 

Share this Video
  • FB
  • Linkdin
  • Whatsapp

ವಿಜಯಪುರ(ಜೂ.27): ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದೆ. ಹಲವೆಡೆ ಧಾರಾಕಾರ ಮಳೆಯಾಗಿದೆ. ಹೀಗಾಗಿ ಗುಮ್ಮಟನಗರಿ ಅಕ್ಷರಶಃ ಮಲೆನಾಡಿನಂತೆ ಗೋಚರಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಇಂದೂ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು ತುಂತುರು ಮಳೆಯಾಗುತ್ತಿದೆ. ಮುಂಗಾರು ಮಳೆ ಜೊತೆಗೆ ಕೃಷಿ ಚಟುವಟಿಕೆಗಳು ಚುರುಕಾಗಿವೆ. ಉತ್ತಮವಾಗಿ ಮಳೆ ಬೀಳುತ್ತಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

Related Video