Big 3 ವರದಿ: ಯಾವಾಗ ಆಗುತ್ತೆ ಬಳ್ಳಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ?
10 ವರ್ಷ ಕಳೆದರೂ ಮುಗಿಯದ ಬಳ್ಳಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ| ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ 120 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭ|ಹಯಗ್ರೀವ ಕನ್ಟ್ರಕ್ಷನ್ ಕಂಪನಿಗೆ ನೀಡಿದ ಆಸ್ಪತ್ರೆ ಕಾಮಗಾರಿ|
ಬಳ್ಳಾರಿ[ಜ.31]: 2009ರಲ್ಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಬಳ್ಳಾರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಅಂತ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ 120 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆದರೆ, ಆಸ್ಪತ್ರೆ ಕಾಮಗಾರಿ ಆರಂಭವಾಗಿ 10 ವರ್ಷ ಕಳೆದರೂ ಇಲ್ಲಿಯವರೆಗೆ ಕಾಮಗಾರಿ ಪೂರ್ಣವಾಗಿಲ್ಲ.
ಹಯಗ್ರೀವ ಕನ್ಟ್ರಕ್ಷನ್ ಕಂಪನಿಗೆ ಆಸ್ಪತ್ರೆ ನಿರ್ಮಾಣದ ಜವಾಬ್ದಾರಿ ವಹಿಸಲಾಗಿತ್ತು. ಆದರೆ, ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಳ್ಳದೆ ಜಿಲ್ಲೆಯ ಜನರು ಚಿಕಿತ್ಸೆಗಾಗಿ ಬೇರೆ ಕಡೆ ಹೋಗೋದು ಮಾತ್ರ ತಪ್ಪಿಲ್ಲ. ಆದಷ್ಟು ಬೇಗ ಆಸ್ಪತ್ರೆ ಮುಗಿದು ಜಿಲ್ಲೆಯ ಜನರಿಗೆ ಉಪಯೋಗಕ್ಕೆ ಬರಲಿ ಎಂದು ಜಿಲ್ಲೆಯ ಜನರ ಆಶಯವಾಗಿದೆ. ಈ ವರದಿಯ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.