ಚಿತ್ರದುರ್ಗ : ಕೋವಿಡ್ ಸೆಂಟರ್‌ನಲ್ಲಿ ಹಾಡಿ ರಂಜಿಸಿದ ಸೋಂಕಿತರು

  • ಕೋವಿಡ್ ಕೇರ್ ಸೆಂಟರ್‌ನಲ್ಲಿ ಸೋಂಕಿತರಿಂದ ಸಂಗೀತ ಸಂಜೆ
  • ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರುವ ಕೋವಿಡ್ ಕೇರ್ ಸೆಂಟರ್.
  • ಬಸವೇಶ್ವರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದ ಸೋಂಕಿತರು.

Share this Video
  • FB
  • Linkdin
  • Whatsapp

 ಚಿತ್ರದುರ್ಗ (ಮೇ.15): ಹಿರಿಯೂರಿನ ಕೋವಿಡ್ ಕೇರ್ ಸೆಂಟರ್‌ನಲ್ಲಿ ಸೋಂಕಿತರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ಸೋಂಕಿತರೇ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗದ ರೆಮ್‌ಡೆಸಿವಿರ್‌ ಟ್ವೀಟ್‌ಗೆ ಮುಂಬೈನಿಂದ ಸೋನು ಸೂದ್‌ ಸ್ಪಂದನೆ ..

ರಾಜಕುಮಾರ ಚಿತ್ರದ ಗೊಂಬೆ ಹೇಳುತೈತೆ ಹಾಡಿಗೆ ಧ್ವನಿಯಾಗಿದ್ದು ಇದಕ್ಕೆ ಕೀಬೋರ್ಡ್ ನುಡಿಸಿ ಸೋಂಕಿತ ರವಿಶಂಕರ್ ಎಲ್ಲರನ್ನೂ ರಂಜಿಸಿದ ರು. ಸುಮಾರು ಹತ್ತಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಕೇರ್ ಸೆಂಟರಲ್ಲಿ ಸೋಂಕಿತರಿಗೆ ಧೈರ್ಯ ತುಂಬಲು ನಡೆದ ವಿಶೇಷ ಕಾರ್ಯಕ್ರಮ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಯ್ತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video