ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

ಮುಂಗಾರು ಮಳೆಯಾಗಲಿ ಎಂದು ಬೆಳಗಾವಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಳಗಾವಿ: ಮುಂಗಾರು ವಿಳಂಬವಾಗಿದ್ದು, ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಸಾವಿರಾರು ಮುಸ್ಲಿಮರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಇನ್ನೂ ಆರಂಭವಾಗದಿದ್ದರಿಂದ, ಹಲವು ಕಡೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ. ಇನ್ನೂ ಘಟಪ್ರಭಾ ನದಿಯಲ್ಲಿ ನೀರು ಖಾಲಿಯಾಗಿರುವ ಹಿನ್ನೆಲೆ ಲಕ್ಷಾಂತರ ಮೀನುಗಳು ಸಾವಿಗೀಡಾಗಿವೆ. ಅಲ್ಲದೇ ನದಿಯಿಂದ ದುರ್ವಾಸನೆ ಬರುತ್ತಿದೆ.

ಇದನ್ನೂ ವೀಕ್ಷಿಸಿ: ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

Related Video