ಹಿಜಾಬ್‌ನಲ್ಲೇ ವಿದ್ಯಾರ್ಥಿನಿಯರಿಂದ ಯೋಗ..!

*  ಹಿಜಾಬ್ ಧರಿಸಿ ಯೋಗ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರು
*  ವಿವಿಧ ಕಾಲೇಜುಗಳಿಂದ ಭಾಗವಹಿಸಿದ್ದ ವಿದ್ಯಾರ್ಥಿನಿಯರು
*  ಕೊಪ್ಪಳ ನಗರದ ಗವಿಮಠ ಆವರಣದಲ್ಲಿ ನಡೆದ ಯೋಗ ದಿನಾಚರಣೆ
 

First Published Jun 21, 2022, 1:48 PM IST | Last Updated Jun 21, 2022, 2:06 PM IST

ವಿಜಯಪುರ/ಕೊಪ್ಪಳ(ಜೂ.21):  ವಿಶ್ವ ಯೋಗ ದಿನಾಚರಣೆ ನಿಮಿತ್ತ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಯೋಗ ಮಾಡಿದ್ದಾರೆ. ಹೌದು, ವಿಜಯಪುರ ಹಾಗೂ ಕೊಪ್ಪಳದಲ್ಲಿ ಯೋಗ ದಿನಾಚರಣೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಯೋಗಾಭ್ಯಾಸ ಮಾಡಿದ್ದಾರೆ. ವಿಜಯಪುರ ನಗರದ ಗೋಳಗುಮ್ಮಟ ಆವರಣದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜುಗಳಿಂದ ಭಾಗವಹಿಸಿದ್ದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಯೋಗಾಸನ ಮಾಡಿದ್ದಾರೆ. ಇನ್ನು ಕೊಪ್ಪಳ ನಗರದ ಗವಿಮಠ ಆವರಣದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕಮದಲ್ಲೂ ಕೂಡ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಯೋಗದಲ್ಲಿ ಪಾಲ್ಗೊಂಡಿದ್ದಾರೆ. 

ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮ ಯಶಸ್ವಿ