Asianet Suvarna News Asianet Suvarna News

ಕರುನಾಡಿನ ಜನತೆಗೆ ಮತ್ತೊಂದು ಶಾಕ್‌: ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ?

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗೆ ಏರಿಸುವಂತೆ 14 ಹಾಲಿನ ಒಕ್ಕೂಟಗಳು ಸಿಎಂಗೆ ಮನವಿ ಮಾಡಿವೆ.
 

ಈಗಾಗಲೇ ವಿದ್ಯುತ್‌, ತರಕಾರಿ, ಬೇಳೆ ಕಾಳುಗಳ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲೇ ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿವೆ. ಜುಲೈ 6ರಂದು ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಪ್ರತಿ ಲೀಟರ್‌ಗೆ 5 ರೂ. ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಈ ಸಭೆಯಾದ ಬಳಿಕ ಸಿಎಂಗೆ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮನವಿ ಮಾಡುತ್ತೇವೆ.ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಎಂಫ್ ನೂತನ ಅಧ್ಯಕ್ಷರಾದ ಭೀಮಾ ನಾಯ್ಕ್‌ ತಿಳಿಸಿದ್ದಾರೆ.

Video Top Stories