Asianet Suvarna News Asianet Suvarna News

ನಂದಿ ಬೆಟ್ಟ ಕ್ಲೋಸ್: ಬಂದ ದಾರಿಗೆ ಸುಂಕವಿಲ್ಲದಂತೆ ಪ್ರವಾಸಿಗರು ವಾಪಸ್

ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಮುಂದಿನ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

First Published Dec 31, 2020, 4:45 PM IST | Last Updated Dec 31, 2020, 5:02 PM IST

ಚಿಕ್ಕಬಳ್ಳಾಪುರ, (ಡಿ.31): ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಮುಂದಿನ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಕೊರೋನಾ 2ನೇ ಅಲೆ ಹಬ್ಬುವ ಸಾಧ್ಯತೆ ಹೆಚ್ಚು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿವೃತ್ತ ವೈರಾಣು ತಜ್ಞ

ಹೌದು.. 2ನೇ ಹಂತದ ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ನಂದಿ ಗಿರಿಧಾಮವನ್ನು ಮೂರು ದಿನಗಳ ಕಾಲ ಬಂದ್ ಮಾಡಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ. ಡಿ 30ರಿಂದ ಬೆಳಗ್ಗೆ ಆರು ಗಂಟೆಯಿಂದ ಜನವರಿ 2 ರ ಬೆಳಿಗ್ಗೆ ಆರು ಗಂಟೆಯವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು  ನಿಷೇಧಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಬಂದ ದಾರಿಗೆ ಸುಂಕವಿಲ್ಲದಂತೆ ಪ್ರವಾಸಿಗರು ವಾಪಸ್ ಅಗಿದ್ದಾರೆ.