ಈ ಗ್ರಾಮಕ್ಕೆ ಬಸ್ ಸೌಕರ್ಯವಿಲ್ಲ, ವಿದ್ಯಾರ್ಥಿಗಳು ಶಾಲೆಗೆ ಹೋಗ್ತಿಲ್ಲ, ಅಧಿಕಾರಿಗಳೇ ಗಮನಿಸಿ
ಕೊಪ್ಪಳದ ಮೋರನಾಳ ಗ್ರಾಮದಲ್ಲಿ 40 ರಿಂದ 50 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಲಾಕ್ ಡೌನ್ ಬಳಿಕ ಈ ಗ್ರಾಮಕ್ಕೆ ಬಸ್ ಸೌಕರ್ಯವಿಲ್ಲ. ನಿತ್ಯ ವಿದ್ಯಾರ್ಥಿಗಳು ನಡೆದುಕೊಂಡು ಹೋಗಬೇಕಾಗಿದೆ.
ಬೆಂಗಳೂರು (ಫೆ. 05): ಕೊಪ್ಪಳದ ಮೋರನಾಳ ಗ್ರಾಮದಲ್ಲಿ 40 ರಿಂದ 50 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಲಾಕ್ ಡೌನ್ ಬಳಿಕ ಈ ಗ್ರಾಮಕ್ಕೆ ಬಸ್ ಸೌಕರ್ಯವಿಲ್ಲ. ನಿತ್ಯ ವಿದ್ಯಾರ್ಥಿಗಳು ನಡೆದುಕೊಂಡು ಹೋಗಬೇಕಾಗಿದೆ. ಭಾರವಾದ ಬ್ಯಾಗ್ ಹೊತ್ತುಕೊಂಡು ಹೋಗಲಾಗದೇ ಪರದಾಡುತ್ತಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಹಾರ ದೊರಕಿಸಿಕೊಡಬೇಕಾಗಿ ಈ ಊರಿನ ಗ್ರಾಮಸ್ಥರು ಆಗ್ರಹಿಸುತ್ತಿದ್ಧಾರೆ.