Asianet Suvarna News Asianet Suvarna News

ಇದು 40% ಸರ್ಕಾರ, ಹಗರಣ ಮುಚ್ಚಿ ಹಾಕಲು ಪತ್ರಕರ್ತರಿಗೆ ಗಿಫ್ಟ್: ಸಿದ್ದರಾಮಯ್ಯ ಕಿಡಿ

ಗುತ್ತಿಗೆದಾರ ದಯಾಮರಣಕ್ಕೆ ಮನವಿ ಸಲ್ಲಿಸಿದ್ದು, ಇದು 40% ಸರ್ಕಾರ ಎಂಬುದು ಮತ್ತೆ ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

First Published Oct 31, 2022, 6:20 PM IST | Last Updated Oct 31, 2022, 6:20 PM IST

ಮೈಸೂರಿನಲ್ಲಿ ಮಾತನಾಡಿದ ಅವರು ಈ ಕುರಿತು ಹಲವಾರು ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಇದೀಗ ಪತ್ರಕರ್ತರಿಗೆ ಗಿಫ್ಟ್ ಕೊಟ್ಟಿದ್ದಾರೆ. ಇವರ ಹಗರಣಗಳನ್ನು ಮುಚ್ಚಿ ಹಾಕಲು ಪತ್ರಕರ್ತರಿಗೆ ಗಿಫ್ಟ್ ರೂಪದಲ್ಲಿ ಹಣ ಹಂಚಿಕೆ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಪತ್ರಕರ್ತರಿಗೆ ಹಂಚಿಕೆಯಾಗಿರುವ ಹಣದ ಮೂಲವನ್ನು ಪತ್ತೆ ಹಚ್ಚಬೇಕು. ಬಿಜೆಪಿಯವರು ಮಹಾನ್ ಭ್ರಷ್ಟರು, ಭಂಡರಾಗಿದ್ದು, ಅವರ ತಪ್ಪನ್ನೂ ಸಮರ್ಥಿಸಿಕೊಳ್ಳುವಂತಹ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿ ಇಟ್ಟಿದ್ದಾರೆ. ಆರ್.ಎಸ್.ಎಸ್ ಸುಳ್ಳಿನ ಫ್ಯಾಕ್ಟರಿಯ ರೂವಾರಿಯಾಗಿದೆ. ಆರ್.ಎಸ್.ಎಸ್ ನಾಯಕರು ಹೇಳಿದಂತೆ ಬಿಜೆಪಿ ನಾಯಕರು ಕೇಳುತ್ತಿದ್ದಾರೆ‌ ಎಂದು ವಾಗ್ದಾಳಿ ನಡೆಸಿದರು.

Video Top Stories