ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ
ಫ್ರೀಡಂಪಾರ್ಕ್‌​ನಲ್ಲಿ ಬಿಜೆಪಿ ನಾಯಕರಿಂದ ಪ್ರತಿಭಟನೆ

First Published Jun 17, 2024, 11:23 AM IST | Last Updated Jun 17, 2024, 11:23 AM IST

ರಾಜ್ಯ ಸರ್ಕಾರದಿಂದ(State government) ಪೆಟ್ರೋಲ್, ಡೀಸೆಲ್(Petrol) ದರ ಏರಿಕೆ ಮಾಡಿದ ಹಿನ್ನೆಲೆ ಪೆಟ್ರೋಲ್(Diesel) ಬೆಲೆ 3 ರೂ, ಡೀಸೆಲ್ ಬೆಲೆ 3.50 ಪೈಸೆ ರೂ. ಹೆಚ್ಚಳವಾಗಿದೆ. ಈ ದರ ಏರಿಕೆಗೆ ಬಿಜೆಪಿ ಆಕ್ರೋಶವನ್ನು ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ(BJP)ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಫ್ರೀಡಂ ಪಾರ್ಕ್‌​ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಸಿ.ಟಿ ರವಿ, ಅಶ್ವತ್ಥನಾರಾಯಣ್ ಸೇರಿ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಮುಗಿತ್ತಿದ್ದಂತೆ ಬೆಲೆ ಏರಿಕೆ ಮಾಡಲಾಗಿದೆ. ಜನ ಸಮಾನ್ಯರ ಮೇಲೆ ಸರ್ಕಾರ ದ್ವೇಷ ಸಾಧಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಅಲ್ಲದೇ ಇಂದು ಸಾಂಕೇತಿಕವಾಗಿ ಪೆಟ್ರೋಲ್, ಡಿಸೇಲ್ ಫ್ರೀಯಾಗಿ ಹಂಚಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಲೆ ಇಳಿಕೆ ಮಾಡದಿದ್ರೆ ನಿರಂತರ ಹೋರಾಟ ಮಾಡುವ ಎಚ್ಚರಿಕೆಯನ್ನೂ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಸ್ತೆ ತಡೆ, ಸೈಕಲ್ ಜಾಥಾ, ಸಿಎಂ ಮನೆ ಮುತ್ತಿಗೆಗೆ ಪ್ಲ್ಯಾನ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ರಕ್ತದ ಕಲೆ ಪತ್ತೆಗೆ ಲೂಮಿನಾರ್‌ ಟೆಸ್ಟ್‌ ! ಕಾರ್‌ ವಾಶಿಂಗ್‌ಗೆ ಕೊಟ್ಟಾಗ ಕುರಿ ರಕ್ತ ಎಂದಿದ್ದ ಹಂತಕರು!