ಫುಟ್‌ಪಾತ್‌ ಏರಿ ಅಂಗಡಿಗೆ ನುಗ್ಗಿದ ಪಿಕಪ್‌ ವಾಹನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ನಿಯಂತ್ರಣ ತಪ್ಪಿದ ಪಿಕಪ್ ವಾಹನ ಫುಟ್‌ಪಾತ್ ಏರಿ ಅಂಗಡಿಗೆ ನುಗ್ಗಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿಯ ಕಾಲು ಕಟ್ ಆಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru)ನಿಯಂತ್ರಣ ತಪ್ಪಿದ ಪಿಕಪ್ ವಾಹನ(Pick-up vehicle) ಫುಟ್‌ಪಾತ್(Footpath) ಏರಿ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿಯ ಕಾಲು ಕಟ್ ಆಗಿದ್ದು, ಗುರುವಾರ ಮಧ್ಯಾಹ್ನ 2.30 ಕ್ಕೆ ಈ ಅಪಘಾತ ನಡೆದಿದೆ. ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಸವಾರನಿಗೆ, ನಿಯಂತ್ರಣ ತಪ್ಪಿ ವೇಗವಾಗಿ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಬೈಕ್ ಸವಾರನನ್ನು ಗುದ್ದಿ ಅಂಗಡಿಗೆ ನುಗ್ಗಿದೆ. ಗಾಯಾಳು ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

Related Video