ಮಧುಸೂದನ್ ಸತ್ಯಸಾಯಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ....
ಪ್ರಧಾನಿ ನರೇಂದ್ರ ಮೋದಿ,ಚಿಕ್ಕಬಳ್ಳಾಪುರದ ಮಧುಸೂದನ್ ಸತ್ಯಸಾಯಿ ವೈದ್ಯಕೀಯ ಸಂಸ್ಥೆಯನ್ನು ಅನಾವರಣ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ, ಮಧುಸೂದನ್ ಸತ್ಯಸಾಯಿ ವೈದ್ಯಕೀಯ ಸಂಸ್ಥೆಯನ್ನು ಅನಾವರಣ ಮಾಡಿದರು. 2022ರ ಏಪ್ರೀಲ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಆಸ್ಪತ್ರೆ ಕಾಮಗಾರಿಗೆ ಅಡಿಗಲ್ಲು ಹಾಕಲಾಗಿತ್ತು. ಇನ್ನು ಇಲ್ಲಿ ಸಾರ್ವಜನಿಕರಿಗೆ ಇಲ್ಲಿ ಉಚಿತವಾಗಿ ವೈದ್ಯಕೀಯ ಸೇವೆ ನೀಡಲಾಗುವುದು. ಸದ್ಯಕ್ಕೆ ಪ್ರತಿ ವರ್ಷ ಇಲ್ಲಿ 100 ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ಗೆ ಪ್ರವೇಶ ನೀಡಲಾಗುತ್ತೆ. 22 ವಿಭಾಗಗಳಿದ್ದು, ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೊಂದಿಕೊಂಡ ಆಸ್ಪತ್ರೆಯಲ್ಲಿ 360 ಹಾಸಿಗೆಗಳ ಸಾಮರ್ಥ್ಯವಿದ್ದು 360 ಹಾಸಿಗೆಗಳನ್ನು ಸಾಮಾನ್ಯ ಕಾಯಿಲೆಗಳ ಚಿಕಿತ್ಸೆಗೆ ಮೀಸಲಿಟ್ಟಿರೆ ತಲಾ 30 ಹಾಸಿಗೆಗಳನ್ನು ತುರ್ತು ಚಿಕಿತ್ಸೆ ಮತ್ತು ತೀವ್ರ ನಿಗಾ ಘಟಕದ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ.