Asianet Suvarna News Asianet Suvarna News

ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ,ಟೋಕನ್‌ ಖರೀದಿಸಿ ಮೆಟ್ರೋದಲ್ಲಿ ಮೋದಿ ಪ್ರಯಾಣ

ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದರು.

ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದರು.ಮೆಟ್ರೋ ರೈಲಿನಲ್ಲಿ ಸಂಚರಿಸುವ ಮೂಲಕ ನಮೋ  ವೈಟ್‌ಫೀಲ್ಡ್‌ - ಕೆ.ಆರ್‌. ಪುರ ಮಾರ್ಗವನ್ನು ಉದ್ಘಾಟಿಸಿದ್ದು ವಿಶೇಷ. ಅಲ್ಲದೆ, ದುಡ್ಡು ಕೊಟ್ಟು ಟೋಕನ್‌ ಖರೀದಿಸಿಯೇ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದು, ಮತ್ತೊಂದು ವಿಶೇಷ. ಮೆಟ್ರೋ ರೈಲಿನಲ್ಲಿ ಕೆಲ ಕಾಲ ನಿಂತುಕೊಂಡು ಹಾಗೂ ಕುಳಿತುಕೊಂಡು ಮೋದಿ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದು, ಈ ವೇಳೆ ಮಕ್ಕಳು ಸೇರಿ ಹಲವರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು. 13.71 ಕಿ.ಮೀ. ಉದ್ದದ ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗವನ್ನು 4,500 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದು ದೇಶದ ಎರಡನೇ ಅತಿ ದೂರ ಕ್ರಮಿಸುವ ಮೆಟ್ರೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.