ಸಫಾರಿ ಸೂಟ್ ನಲ್ಲಿ ನಮೋ,ಬಂಡೀಪುರದಲ್ಲಿ ಪ್ರಧಾನಿ ಭರ್ಜರಿ ಸವಾರಿ

ಪ್ರಧಾನಿ ನರೇಂದ್ರ ಮೋದಿ, ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದು, ಹುಲಿ ಸಂರಕ್ಷಣಾ ಯೋಜನೆ 50 ವರ್ಷ ಪೂರೈಸಿದ ಹಿನ್ನೆಲೆ ಭೆಟಿ ನೀಡಿದ್ದಾರೆ.
 

First Published Apr 9, 2023, 9:58 AM IST | Last Updated Apr 9, 2023, 9:58 AM IST

ಪ್ರಧಾನಿ ನರೇಂದ್ರ ಮೋದಿ ಇಂದು ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಇಂದು ಬೆಳ್ಳಂಬೆಳಗ್ಗೆ ಸಫಾರಿ ನಡೆಸಿದ ಪ್ರಧಾನಿ ಬಂಡೀಪುರ ಕ್ಯಾಂಪ್ ನ, ವನ್ಯಜೀವಿಗಳ ಸೌಂದರ್ಯ ಸವಿದರು.ಸಫಾರಿಗೆ ಸೂಕ್ತವಾಗುವ ವಿಶೇಷ ಉಡುಪಿನಲ್ಲಿ ಪ್ರಧಾನಿ ಮೋದಿ ಪಯಣ ಮಾಡಿದ್ದು, ಫೋಟೋ, ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇನ್ನು : ಮೈಸೂರು, ಚಾಮರಾಜನಗರಗಳಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮಗಳಲ್ಲಿ ಹಾಗೂ ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ಸಂಭ್ರಮದಲ್ಲಿ  ಪ್ರಧಾನಿ ಮೋದಿ ಭಾಗವಹಿಸುತ್ತಿದ್ದಾರೆ.ಕಾರ್ಯಕ್ರಮದಲ್ಲಿ ವಿದೇಶಗಳ ಆಹ್ವಾನಿತರು, ಅರಣ್ಯಾಧಿಕಾರಿಗಳು, ಅರಣ್ಯ ಮತ್ತು ಹುಲಿ ಸಂರಕ್ಷಣೆಯಲ್ಲಿ ತೊಡಗಿರುವವರು ಪಾಲ್ಗೊಳ್ಳಲಿದ್ದಾರೆ.

Video Top Stories