ಫಾಸ್ಟ್ ಟ್ರ್ಯಾಕ್ ಕೋರ್ಟ್ ಮನವಿಗೆ ಪೊಲೀಸರ ನಿರ್ಧಾರ.. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಮನವಿ ಮಾಡುವ ಸಾಧ್ಯತೆ
ಆರೋಪಿ ಪ್ರಭಾವದಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ
ಹೆಚ್ಚು ಸಮಯ ಕಳೆದರೆ ಸಾಕ್ಷಿಗಳು ಉತ್ಸಾಹ ಕಳೆದುಕೊಳ್ಳುವ ಸಾಧ್ಯತೆ
ಹೈಪ್ರೊಫೈಲ್ ಪ್ರಕರಣಗಳಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಅನುಮತಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ದರ್ಶನ್ (Darshan) ಮತ್ತು ಗ್ಯಾಂಗ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಆರೋಪಿಗಳಿಗೆ ಬೇಗ ಶಿಕ್ಷೆ ಕೊಡಿಸುವುದಕ್ಕಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ(Fast Track Court) ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೂನ್ 22ಕ್ಕೆ ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಗ್ಯಾಂಗ್‌ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ರಾಜ್ಯ ಪೊಲೀಸ್ ಸಿದ್ಧತೆಯಲ್ಲಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ನೀಡಬೇಕೆಂದು ಪೊಲೀಸರು ರಿಜಿಸ್ಟ್ರಾರ್‌ಗೆ ಮನವಿ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆಂಬ ಮಾಹಿತಿ ನಮಗೆ ಸಿಕ್ಕಿದೆ. ಈ ಮೂಲಕ ಆರೋಪಿಗಳಿಗೆ ಬೇಗ ಶಿಕ್ಷೆ ಕೊಡಿಸಬೇಕೆಂಬ ನಿರ್ಧಾರವನ್ನು ಪೊಲೀಸರು(Police) ಮಾಡಿದಂತಿದೆ. ಹೀಗಾಗಿ ಚಾರ್ಚ್ ಶೀಟ್ ಸಲ್ಲಿಕೆಯಾದ ನಂತರ ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಸಲ್ಲಿಸುವ ನಿರ್ಧಾರವನ್ನು ಪೊಲೀಸರು ಮಾಡಿದ್ದಾರಂತೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದು ಏಕೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತೆ. ಪೊಲೀಸರ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವಿದೆ. ಹಾಗೆನೇ ಇಂದಿಷ್ಟು ಅನುಮಾನಗಳು ಸಹ ಪೊಲೀಸರಿಗೆ ಇವೆ. ಹೀಗಾಗಿ ಪೊಲೀಸರ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದನ್ನೂ ವೀಕ್ಷಿಸಿ: Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?