ಮುಸ್ಲಿಂ ಸಂಘಟನೆಗಳ ಪ್ರತಿಭಟನೆ: ಮಂಗಳೂರಲ್ಲಿ ಹೈ ಅಲರ್ಟ್..!

ಬುಧವಾರ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ನಡೆಯುವ ಹಿನ್ನೆಲೆಯಲ್ಲಿ ದ‌.ಕ ಜಿಲ್ಲೆಯಾದ್ಯಂತ ಹೈ ಅಲಟ್‌ಗೆ ಡಿಜಿಪಿ ನೀಲಮಣಿ ರಾಜು ಸೂಚನೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಮಂಗಳೂರು(ಜ.14): ಬುಧವಾರ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ನಡೆಯುವ ಹಿನ್ನೆಲೆಯಲ್ಲಿ ದ‌.ಕ ಜಿಲ್ಲೆಯಾದ್ಯಂತ ಹೈ ಅಲರ್ಟ್ ಗೆ ಡಿಜಿಪಿ ನೀಲಮಣಿ ರಾಜು ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಗೆ ಖಡಕ್ ಆದೇಶ ನೀಡಲಾಗಿದೆ. ಸದ್ಯ ಮಂಗಳೂರು ಸೇರಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಿಂದ ಪೊಲೀಸರು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2500 ಪೊಲೀಸರನ್ನು ನಿಯೋಜಿಸಲಾಗಿದೆ. ಧಾರವಾಡ, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಗದಗ, ಬಳ್ಳಾರಿ ಜಿಲ್ಲೆಗಳ ಪೊಲೀಸರು ಆಗಮಿಸಿದ್ದಾರೆ. ಡಿ.19ರ ಗಲಭೆ ಬಳಿಕ ಮೊದಲ ಬಾರಿಗೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ.

ಸಂಚಾರ ಬದಲಾವಣೆ

ನಾಳೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಚಾರ ಬದಲಾವಣೆಯಾಗಲಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳು ಮೆಲ್ಕಾರ್, ಕೊಣಾಜೆ, ತೊಕ್ಕೊಟ್ಟು ಮೂಲಕ ಮಂಗಳೂರು ತಲುಪಲಿದ್ದು, ಮಂಗಳೂರಿನಿಂದ ಬೆಂಗಳೂರು ಕಡೆ ಸಾಗುವ ವಾಹನಗಳು ಪಂಪ್ ವೆಲ್, ತೊಕ್ಕೊಟ್ಟು, ಕೊಣಾಜೆ, ಬಿ.ಸಿ.ರೋಡ್ ಮೂಲಕ ಸಾಗಲಿವೆ.

ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ಪರಾರಿ: ಮಂಗಳೂರಲ್ಲಿ ಹೈಅಲರ್ಟ್‌

ಉಡುಪಿಯಿಂದ ಬೆಂಗಳೂರು ಕಡೆಗೆ ಪಡುಬಿದ್ರೆ, ಕಾರ್ಕಳ, ಧರ್ಮಸ್ಥಳ, ಶಿರಾಡಿ ಮೂಲಕ ಹೋಗಲಿದ್ದು, ಬಿ.ಸಿ.ರೋಡ್, ಕೈಕಂಬ, ಪೊಳಲಿ ಮೂಲಕವೂ ಮಂಗಳೂರು ಸಂಪರ್ಕಿಸಲು ಅವಕಾಶವಿದೆ. ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಗಳೂರು ನಗರದಲ್ಲಿ ಅನುಮತಿ ಸಿಗದ ಹಿನ್ನೆಲೆ ಸ್ಥಳ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ.

ದ.ಕ ಮತ್ತು ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇದ್ದು, ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಮುಖ್ಯ ಭಾಷಣ ಮಾಡಲಿದ್ದಾರೆ. ಪಿಎಫ್‌ಐ, ಎಸ್ ಡಿಪಿಐ ಸೇರಿ ಹಲವು ಸಂಘಟನೆಗಳು ಭಾಗಿಯಾಗಲಿವೆ. ಮಧ್ಯಾಹ್ನ 3 ಗಂಟೆಗೆ ಬೃಹತ್ ಪ್ರತಿಭಟನೆ ‌ನಡೆಯಲಿದೆ.

ಸೀಕ್ವೆನ್ಸ್‌ ಬದಲಿಸಿ ವಿಡಿಯೋ ಬಿಡುಗಡೆ ಮಾಡಿದ್ರಾ ಕುಮಾರಸ್ವಾಮಿ..?

Related Video