ಪ್ರಜ್ವಲ್ ಕ್ಷಮಿಸಲಾರದಂತಹ ಅಪರಾಧ ಮಾಡಿದ್ದು, ಕ್ಷಮಿಸುವ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್ ಜೋಶಿ

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಎಸ್‌ಐಟಿ ಕಸ್ಟಡಿಗೆ ಕೊಡಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದೆ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
 

First Published Jun 1, 2024, 5:55 PM IST | Last Updated Jun 1, 2024, 5:58 PM IST

ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂತಹ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಹೇಳಿದ್ದಾರೆ. ಪ್ರಜ್ವಲ್ ರೇವಣ್ಣನನ್ನು(Prajwal Revanna case) ಎಸ್ಐಟಿ (SIT) ಕಸ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣವಾಗಿದೆ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ. ಮನಸ್ಸಿಗೆ ಕಿರಿಕಿರಿ ಆಗುತ್ತಿದೆ. ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ತನಿಖೆಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ.

ಪ್ರಜ್ವಲ್ ರೇವಣ್ಣ(Prajwal Revanna) ರಾಜ್ಯದ ಕ್ಷಮೆ ಕೇಳಿದ ವಿಚಾರವಾಗಿ ಮಾತನಾಡಿದ ಅವರು, ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟುಬಿಡೋಕೆ ಆಗುತ್ತದೆಯೇ..? ಯಾಕೆ ಕ್ಷಮೆ ಕೇಳಿದರು ಅಂತ ಪ್ರಜ್ವಲ್ ಉತ್ತರ ಕೊಡಲಿ. ಅವರು ಕ್ಷಮೆ ಕೇಳುವುದಿದ್ದರೆ ಸಂತ್ರಸ್ತರ ಕ್ಷಮೆ ಕೇಳಲಿ. ಪ್ರಜ್ವಲ್‌ಗೆ ಆಗುವ ಶಿಕ್ಷೆ ಆಗಲೇಬೇಕು. ಪೆನ್ ಡ್ರೈವ್ ಹಂಚಿಕೆ ಇತ್ಯಾದಿಗಳನ್ನು ನೋಡಿದಾಗ ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪೆನ್‌ಡ್ರೈವ್ ಪ್ರಕರಣದಲ್ಲಿ ಕಂಪ್ಲೀಟ್ ಫ್ಯಾಮಿಲಿ ಲಾಕ್..? ತಾಯಿ ಭವಾನಿ, ಮಗ ಪ್ರಜ್ವಲ್‌ಗೆ ‘ಬ್ಯಾಡ್ ಫ್ರೈಡೆ’..!

Video Top Stories